ADVERTISEMENT

ಕೊರೊನಾ ಸೋಂಕು ನಿವಾರಕ ದ್ರಾವಣ ಸಿಂಪರಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2021, 13:27 IST
Last Updated 14 ಮೇ 2021, 13:27 IST
ಹೊಸಪೇಟೆಯಲ್ಲಿ ಶುಕ್ರವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು
ಹೊಸಪೇಟೆಯಲ್ಲಿ ಶುಕ್ರವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು   

ಹೊಸಪೇಟೆ(ವಿಜಯನಗರ): ಗಣಿ ಉದ್ಯಮಿ ರಾಣಿ ಸಂಯುಕ್ತಾ ಅವರು ಅವರ ಸ್ವಂತ ಖರ್ಚಿನಲ್ಲಿ ನಗರದಾದ್ಯಂತ ಸೋಂಕು ನಿವಾರಕ ದ್ರಾವಣ ಸಿಂಪರಣೆಗೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಿದರು.

ಸಾವಿರ ಲೀಟರ್‌ ಸ್ಯಾನಿಟೈಸರ್‌ ಸಂಗ್ರಹ ಸಾಮರ್ಥ್ಯದ ಟ್ಯಾಂಕರ್‌ ಹೊತ್ತ ಎರಡು ಮಿನಿ ಲಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದ ರಾಣಿ ಸಂಯುಕ್ತಾ, ‘ಹಂತ ಹಂತವಾಗಿ ನಗರದ ಎಲ್ಲ ಬಡಾವಣೆಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುತ್ತದೆ. ಸದ್ಯ ನಾಲ್ಕು ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಅವುಗಳ ಸಂಖ್ಯೆ ಹೆಚ್ಚಿಸಲಾಗುವುದು’ ಎಂದು ತಿಳಿಸಿದರು.

‘ನಗರವನ್ನು ಸೋಂಕು ಮುಕ್ತ ಮಾಡುವ ಉದ್ದೇಶದಿಂದ ಈ ಕೆಲಸ ಆರಂಭಿಸಲಾಗಿದೆ. ಇದರ ಸಾರ್ವಜನಿಕರ ಸಹಕಾರ ಅಗತ್ಯ. ಎಲ್ಲರೂ ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಜೆ.ವಸಂತ್ ಕುಮಾರ್, ನಿಂಗಪ್ಪ, ಚರಣ್ ಪಟ್ಟಣಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.