ADVERTISEMENT

ಹೊಸಪೇಟೆ: ಸಂಭ್ರಮದಿಂದ ಸಪ್ತಾಂಜನೇಯ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 11:44 IST
Last Updated 7 ಏಪ್ರಿಲ್ 2019, 11:44 IST
ಹೊಸಪೇಟೆಯ ಅನಂತಶಯನಗುಡಿಯಲ್ಲಿ ನಡೆದ ಸಪ್ತಾಂಜನೇಯ ರಥೋತ್ಸವಕ್ಕೆ ನೂರಾರು ಜನ ಸಾಕ್ಷಿಯಾದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯ ಅನಂತಶಯನಗುಡಿಯಲ್ಲಿ ನಡೆದ ಸಪ್ತಾಂಜನೇಯ ರಥೋತ್ಸವಕ್ಕೆ ನೂರಾರು ಜನ ಸಾಕ್ಷಿಯಾದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಇಲ್ಲಿನ ಅನಂತಶಯನಗುಡಿ ಸಪ್ತಾಂಜನೇಯ ರಥೋತ್ಸವ ಶನಿವಾರ ಸಂಜೆ ಶ್ರದ್ಧಾ, ಭಕ್ತಿ ಹಾಗೂ ಸಡಗರ, ಸಂಭ್ರಮದಿಂದ ನೆರವೇರಿತು.

ಸಪ್ತಾಂಜನೇಯ ದೇವಸ್ಥಾನದಿಂದ ಹಂಪಿ–ಕಂಪ್ಲಿ ಮುಖ್ಯರಸ್ತೆಯಲ್ಲಿ ಭಕ್ತರು ತೇರು ಎಳೆದರು. ಈ ವೇಳೆ ಬಾಳೆಹಣ್ಣು, ಉತ್ತತ್ತಿ, ಹೂ ಎಸೆದು ಹರಕೆ ತೀರಿಸಿದರು. ಆಂಜನೇಯ ಸ್ವಾಮಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು.

ರಥೋತ್ಸವ ಕಣ್ತುಂಬಿಕೊಳ್ಳಲು ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ಬಂದಿದ್ದರು. ಇದರಿಂದ ಮುಖ್ಯರಸ್ತೆಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ತೇರಿಗೂ ಮುನ್ನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆಯಿಂದ ಸಂಜೆಯ ವರೆಗೆ ಜನ ಭೇಟಿ ನೀಡಿ ದೇವರ ದರ್ಶನ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.