ADVERTISEMENT

ಸೇವಾ ದಳ ಕಾರ್ಯಕರ್ತೆಯರಿಗೆ ಸೀರೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 12:01 IST
Last Updated 6 ಆಗಸ್ಟ್ 2021, 12:01 IST
ಹೊಸಪೇಟೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಅವರು ಸೇವಾ ದಳದ ಕಾರ್ಯಕರ್ತೆಗೆ ಸೀರೆ ವಿತರಿಸಿದರು. ದಳದ ಜಿಲ್ಲಾ ಅಧ್ಯಕ್ಷ ಬಿ. ಮಾರೆಣ್ಣ ಇದ್ದಾರೆ
ಹೊಸಪೇಟೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಅವರು ಸೇವಾ ದಳದ ಕಾರ್ಯಕರ್ತೆಗೆ ಸೀರೆ ವಿತರಿಸಿದರು. ದಳದ ಜಿಲ್ಲಾ ಅಧ್ಯಕ್ಷ ಬಿ. ಮಾರೆಣ್ಣ ಇದ್ದಾರೆ   

ಹೊಸಪೇಟೆ (ವಿಜಯನಗರ): ಕಾಂಗ್ರೆಸ್‌ ಸೇವಾ ದಳದ ಮಹಿಳಾ ಕಾರ್ಯಕರ್ತೆಯರಿಗೆ ಶುಕ್ರವಾರ ನಗರದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಉಚಿತವಾಗಿ ಸೀರೆ ವಿತರಿಸಲಾಯಿತು.

ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಅವರು 50 ಕಾರ್ಯಕರ್ತೆಯರಿಗೆ ಸೀರೆ ವಿತರಿಸಿದರು. ‘ಪಕ್ಷ ಸಂಘಟನೆಯಲ್ಲಿ ಸೇವಾ ದಳದ ಕಾರ್ಯಕರ್ತರ ಪರಿಶ್ರಮ ಹೆಚ್ಚಿದೆ. ಎಲ್ಲರೂ ಒಗ್ಗಟ್ಟಿನಿಂದ ತಳಮಟ್ಟದಿಂದ ಪಕ್ಷ ಸಂಘಟನೆಗೆ ಕೆಲಸ ಮಾಡಬೇಕು. ರಾಜ್ಯ, ಕೇಂದ್ರದಲ್ಲಿ ಪುನಃ ಪಕ್ಷವನ್ನು ಅಧಿಕಾರಕ್ಕೆ ತರೋಣ’ ಎಂದು ನಿಯಾಜಿ ಹೇಳಿದರು.

ಸೇವಾ ದಳದ ಜಿಲ್ಲಾ ಅಧ್ಯಕ್ಷ ಬಿ.ಮಾರಣ್ಣ, ತಾಲ್ಲೂಕು ಅಧ್ಯಕ್ಷ ಪರಶುರಾಮ, ಸೋಮಪ್ಪ, ಆಲಂ ಭಾಷ, ನನ್ನಿಬೀ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.