ಬಳ್ಳಾರಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಕುಂದುಕೊರತೆ ಕೋಶ ರಚನೆ, ಬಡ್ತಿಯಲ್ಲಿ ತಾರತಮ್ಯ ನಿವಾರಣೆಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಎಸ್‌ಸಿ, ಎಸ್‌ಟಿ ನೌಕರ ಕ್ಷೇಮಾಭಿವೃದ್ಧಿ ಸಂಘದಿಂದ ಬ್ಯಾಂಕ್ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಡಿಪಿ ಬೊಮ್ಮಯ್ಯ, ‘ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಎಸ್‌ಸಿ, ಎಸ್‌ಟಿ ನೌಕರರ ಸಮಸ್ಯೆ ಆಲಿಸಲು ಕುಂದುಕೊರತೆಯ ಕೋಶ ರಚನೆಯಾಗಬೇಕು. ವರ್ಗಾವಣೆ ಮತ್ತು ಬಡ್ತಿಯಲ್ಲಿ ಆಗುತ್ತಿರುವ ತಾರತಮ್ಯ ನಿವಾರಿಸಬೇಕು. ಜೇಷ್ಠತೆ, ಶಿಸ್ತು ಕ್ರಮಗಳಲ್ಲಿಯೂ ಸಮುದಾಯದ ನೌಕರರನ್ನು ಗುರಿಯಾಗಿಸಲಾಗುತ್ತಿದೆ. ಇವುಗಳನ್ನು ಬ್ಯಾಂಕ್ ಕೂಡಲೇ ಸರಿಪಡಿಸಬೇಕು’ ಎಂದರು.
‘ಎಸ್‌ಸಿ, ಎಸ್‌ಟಿ ನೌಕರರಿಗೆ ಸೌಲಭ್ಯಗಳನ್ನು ನೀಡುವಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಡಳಿತ ಮಂಡಳಿ ವತಿಯಿಂದ ನಿರಂತರ ಅನ್ಯಾಯವಾಗುತ್ತಿದೆ ’ ಎಂದು ಆರೋಪಿಸಿದರು.
ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.