ಕೂಡ್ಲಿಗಿ: ಪಟ್ಟಣದಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ 10 ವಿದ್ಯಾರ್ಥಿಗಳು ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜೆಎಸ್‍ಡಬ್ಲ್ಯೂ ಎನರ್ಜಿ ಕಂಪನಿಯಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಎಸ್. ಮಲ್ಲಪ್ಪ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಈಚೆಗೆ ನಡೆದಿದ್ದ ಕ್ಯಾಂಪಸ್ ಆಯ್ಕೆ ಸಂದರ್ಭದಲ್ಲಿ ನಡೆದ ಸಂದರ್ಶನದಲ್ಲಿ ಮೆಕನಿಕಲ್ ವಿಭಾಗದಿಂದ 4 ವಿದ್ಯಾರ್ಥಿಗಳು ಹಾಗೂ ಸಿವಿಲ್ ವಿಭಾಗದಿಂದ 6 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪ್ರತಿ ತಿಂಗಳು ₹25 ಸಾವಿರದಿಂದ ₹30 ಸಾವಿರ ವೇತನ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಶುಭ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.