ADVERTISEMENT

ಹೆಚ್ಚಿನ ಶುಲ್ಕ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2022, 12:33 IST
Last Updated 27 ಅಕ್ಟೋಬರ್ 2022, 12:33 IST
ಎಸ್‌ಎಫ್‌ಐ ಕಾರ್ಯಕರ್ತರು ಗುರುವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಎಸ್‌ಎಫ್‌ಐ ಕಾರ್ಯಕರ್ತರು ಗುರುವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಪದವಿ ಕಾಲೇಜುಗಳಲ್ಲಿ ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚಿಗೆ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಪದವಿ ಪ್ರವೇಶಕ್ಕೆ ಸರ್ಕಾರ ಶುಲ್ಕ ನಿಗದಿಪಡಿಸಿದೆ. ಆದರೆ, ಕೆಲವು ಕಾಲೇಜುಗಳಲ್ಲಿ ಅದಕ್ಕೂ ಮೀರಿ ಹೆಚ್ಚಿನ ಶುಲ್ಕ ಸಂಗ್ರಹಿಸಲಾಗುತ್ತಿದೆ. ಇದು ಸರ್ಕಾರದ ನಿಯಮಕ್ಕೆ ವಿರುದ್ಧವಾದ ನಡೆ. ಜಿಲ್ಲಾಡಳಿತ ಅದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಕೆ.ಎ. ಪವನಕುಮಾರ್‌, ಜಿಲ್ಲಾ ಸಮಿತಿ ಸದಸ್ಯ ಶಿವಾರೆಡ್ಡಿ, ಆಯಿಷಾ, ಕಾವ್ಯಾಂಕಲಿ, ಅಫ್ರಿನ್‌ಬಾನು, ಸಂಜನಾ ಎಸ್‌., ರಮೇಶ, ರಿಯಾನಾ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.