
ತೆಕ್ಕಲಕೋಟೆ: ಖಾಸಗಿ ಶಾಲೆಗಳು ನಾಯಿ ಕೊಡೆಯಂತೆ ತಲೆಯೆತ್ತಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿದ್ಯಾಭ್ಯಾಸವನ್ನು ಕಸಿಯುವ ನಿಟ್ಟಿನಲ್ಲಿ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿಲೀನದ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವುದನ್ನ ವಿರೋಧಿಸುತ್ತೇವೆ ಎಂದು ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಮಿತಿ ಸದಸ್ಯ ನಾಗರಾಜ್ ಹೇಳಿದರು.
ಸಮೀಪದ ಎಂ ಸೂಗೂರು ಗ್ರಾಮದಲ್ಲಿ ಸೋಮವಾರ ನಡೆದ ಎಸ್‌ಎಫ್‌ಐ 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಲಾ ಕಾಲೇಜಿನ ಹಾಸ್ಟೆಲ್‌ಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.
ಕಾರ್ಮಿಕ ಮುಖಂಡರಾದ ಕುಮಾರ್, ಕೆಂಚಪ್ಪ, ಸೋಮನಾಥ್, ಓಬಳೇಶ್, ಬೀರಪ್ಪ, ಹುಲುಗಪ್ಪ, ಎನ್ ವೀರೇಶ್, ವಿದ್ಯಾರ್ಥಿ ಮುಖಂಡರಾದ ವಸಂತ್ ಕುಮಾರ್ ರವಿ ಕುಮಾರ್ ರಮೇಶ್ ಪವನ್ ಮಲ್ಲಿಕಾರ್ಜುನ್ ಗಂಗಾಧರ್ ಸ್ವಾಮಿ ಮರಿಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.