ADVERTISEMENT

ಪ್ರಜಾವಾಣಿ ವರದಿ ಫಲಶ್ರುತಿ: ಶಾಲೆ ಎದುರಿನ ಶೆಡ್ ತೆರವು

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 9:08 IST
Last Updated 23 ಜನವರಿ 2021, 9:08 IST
ಪೊಲೀಸ್ ಬಂದೋಬಸ್ತ್‌ನಲ್ಲಿ ಶೆಡ್‌ಗಳನ್ನು ತೆರವುಗೊಳಿಸಲಾಯಿತು.
ಪೊಲೀಸ್ ಬಂದೋಬಸ್ತ್‌ನಲ್ಲಿ ಶೆಡ್‌ಗಳನ್ನು ತೆರವುಗೊಳಿಸಲಾಯಿತು.   

ಹೊಸಪೇಟೆ: ಇಲ್ಲಿನ ಚಿತ್ತವಾಡ್ಗಿ ವಿನೋಬಾ ಭಾವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಶೆಡ್‌ಗಳನ್ನು ಶನಿವಾರ ಪೊಲೀಸರು ತೆರವುಗೊಳಿಸಿದರು.

ನೂರು ವರ್ಷದ ಶಾಲೆಗೆ ನೂರೆಂಟು ವಿಘ್ನ ಶೀರ್ಷಿಕೆ ಅಡಿ ಜ.21ರಂದು ಪ್ರಜಾವಾಣಿ ವರದಿ ಪ್ರಕಟಿಸಿತ್ತು.

ಶಾಲೆಯೂ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಗೋಡೆಗೆ ಹೊಂದಿಕೊಂಡಂತೆ ಶೆಡ್ ನಿರ್ಮಿಸಿರುವುದರಿಂದ ಕಿಟಕಿ ತೆರೆಯಲು ಸಾಧ್ಯವಾಗುತ್ತಿರಲಿಲ್ಲ. ಶಬ್ದ ಮಾಲಿನ್ಯದಿಂದ ವಿದ್ಯಾರ್ಥಿಗಳಿಗೆ ಪಾಠ ಕೇಳಲು ತೊಂದರೆಯಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವರದಿ ಬಂದ ದಿನವೇ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದರು. ಅದೇ ರೀತಿ ಶೆಡ್ ತೆರವುಗೊಳಿಸಲು ನಿರ್ದೇಶನ ಕೊಟ್ಟಿದ್ದರು.

ADVERTISEMENT

ಅದೇ ಪ್ರಕಾರ ಶನಿವಾರ ಪೊಲೀಸ್ ಬಂದೋಬಸ್ತ್‌ನಲ್ಲಿ ಕೆಲ ಶೆಡ್ ತೆರವುಗೊಳಿಸಿದರೆ, ಕೆಲವನ್ನು ಶೆಡ್ ಮಾಲೀಕರೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.