ಹೂವಿನಹಡಗಲಿ: ತಾಲ್ಲೂಕಿನ ಹೊಳಲು ಗ್ರಾಮದ ಅನಂತಶಯನ ನಗರದಲ್ಲಿ ಶುಕ್ರವಾರ ವಿದ್ಯುತ್ ಲೈನ್ ಸ್ಪರ್ಶಿಸಿ ತೀವ್ರ ಗಾಯಗೊಂಡಿದ್ದ ಮಂಗವನ್ನು ಯುವಕರು ರಕ್ಷಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
11 ಕೆವಿ ವಿದ್ಯುತ್ ಲೈನ್ ತಗುಲಿ ಗಾಯಗೊಂಡಿದ್ದ ಮಂಗವನ್ನು ಯುವಕರು ಪಶು ಚಿಕಿತ್ಸಾಲಯಕ್ಕೆ ತಂದು ಚಿಕಿತ್ಸೆ ಕೊಡಿಸಿದ್ದಾರೆ. ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ್ ಗಾಯಗೊಂಡಿದ್ದ ಮಂಗಕ್ಕೆ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ನಂತರ ಯುವಕರು ಮಂಗವನ್ನು ಮನೆಯಲ್ಲಿರಿಸಿ ಆರೈಕೆ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.