
ಹರಪನಹಳ್ಳಿ: ತಾಲ್ಲೂಕಿನ ಹಿರೆಮೇಗಳಗೆರೆ ಗ್ರಾಮದಲ್ಲಿ ನಾಗಲಿಂಗೇಶ್ವರ ದೇವಸ್ಥಾನದಲ್ಲಿ ಶಿವ ಪಂಚಾಕ್ಷರಿ ಪಠಣ, ಸಹಸ್ರ ಬಿಲ್ವಾರ್ಚನೆ ಕಾರ್ಯಕ್ರಮ ಈಚೆಗೆ ನಡೆಯಿತು.
ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಹಳ್ಳಿಗಳಲ್ಲಿ ಕುಟುಂಬಗಳ ಆರ್ಥಿಕ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ರೂಪಿಸುತ್ತಿದೆ. ಇಲ್ಲಿ ಸದಸ್ಯತ್ವ ಪಡೆದ ಮಹಿಳೆಯರು ಉಳಿತಾಯ ಖಾತೆ ಮೂಲಕ ತಮ್ಮ ಕುಟುಂಬ ಸದೃಢಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ನಿರ್ದೇಶಕ ಪ್ರವೀಣ್ ಮಾತನಾಡಿ, ಸಂಘದ ಸದಸ್ಯರು ಗ್ರಾಮಾಭಿವೃದ್ದಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಪರಶುರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮುಖಂಡ ತಾಲ್ಲೂಕು ಯೋಜನಾಧಿಕಾರಿ ವೆಂಕಟರಾವ್ ಶಾನುಭೋಗ, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.