ADVERTISEMENT

ತೋರಣಗಲ್ಲು | ಶಾರ್ಟ್ ಸರ್ಕಿಟ್: ಬಣವೆಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 15:54 IST
Last Updated 25 ಫೆಬ್ರುವರಿ 2024, 15:54 IST
<div class="paragraphs"><p> ಬಣವೆಗೆ ಬೆಂಕಿ </p></div>

ಬಣವೆಗೆ ಬೆಂಕಿ

   

ತೋರಣಗಲ್ಲು: ಹೋಬಳಿಯ ಕುರೆಕುಪ್ಪ ಪಟ್ಟಣದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ರೈತ ಕೆ.ಹೆಮಗಿರಿಯಪ್ಪ ಅವರಿಗೆ ಸೇರಿದ ಭತ್ತದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟವುಂಟಾದ ಘಟನೆ ಭಾನುವಾರ ನಡೆದಿದೆ.

ಜಿಂದಾಲ್ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 40 ಟ್ರ್ಯಾಕ್ಟರ್‌ಗಳಷ್ಟು ಹುಲ್ಲನ್ನು ಸಂಗ್ರಹಿಸಲಾಗಿತ್ತು. ಸುಮಾರು ₹3 ಲಕ್ಷ ಮೌಲ್ಯದ ಹುಲ್ಲು ಬೆಂಕಿಗೆ ಆಹುತಿಯಾಗಿದೆ.

ADVERTISEMENT

‘ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿರುವ ಪ್ರಾಥಮಿಕ ವರದಿಯನ್ನು ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಹಾರಕ್ಕಾಗಿ ಉನ್ನತ ಅಧಿಕಾರಿಗಳಿಗೆ ವರದಿಯನ್ನು ಶೀಘ್ರವಾಗಿ ರವಾನಿಸಲಾಗುವುದು’ ಎಂದು ತೋರಣಗಲ್ಲು ಹೋಬಳಿಯ ಕಂದಾಯ ನಿರೀಕ್ಷಕ ಗಣೇಶ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.