ಹೊಸಪೇಟೆ: ಶ್ರಾವಣ ಮಾಸದ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಗುರುವಾರ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿರೂಪಾಕ್ಷನಿಗೆ ಅಭಿಷೇಕ ಮಾಡಿ, ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ ಪೂಜಿಸಲಾಯಿತು. ಶ್ರಾವಣದ ಮೊದಲ ದಿನವಾಗಿದ್ದರಿಂದ ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಜನ ದೇಗುಲಕ್ಕೆ ಬಂದು ದೇವರ ದರ್ಶನ ಪಡೆದರು.
ತುಂಗಭದ್ರಾ ನದಿಯಲ್ಲಿ ಮಿಂದೆದ್ದ ಭಕ್ತರು ದೇವಸ್ಥಾನಕ್ಕೆ ಹೋಗಿ ದೇವರಿಗೆ ವಿಶೇಷ ಅರ್ಚನೆ, ಪೂಜೆ ಮಾಡಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ನಂತರ ಕಡಲೆಕಾಳು ಗಣಪ, ಸಾಸಿವೆಕಾಳು ಗಣಪ, ಕಮಲ ಮಹಲ, ಆನೆಸಾಲು ಮಂಟಪ ಸೇರಿದಂತೆ ಇತರೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ದೇವಸ್ಥಾನದ ಮುಂಭಾಗದಲ್ಲಿನ ರಥಬೀದಿಯಲ್ಲಿ ಅನೇಕರು ವಾಹನಗಳಿಗೆ ಪೂಜೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.