ADVERTISEMENT

ಸಂತ್ರಸ್ತೆ ಗುರುತು ಬಹಿರಂಗ: ಕ್ಷಮೆ ಕೋರಿದ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 23:30 IST
Last Updated 21 ಜನವರಿ 2026, 23:30 IST
ಶ್ರೀರಾಮುಲು
ಶ್ರೀರಾಮುಲು   

ಬಳ್ಳಾರಿ: ‘ನಗರದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಯ ಪರಿಣಾಮಗಳನ್ನು ತಿಳಿಯಪಡಿಸುವ ಭರದಲ್ಲಿ ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಬೇಕಾಯಿತು. ಇದಕ್ಕಾಗಿ ನಾನು ಕ್ಷಮೆ ಕೋರುವೆ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು. 

‘ಬಳ್ಳಾರಿಯಲ್ಲಿ ಅಕ್ರಮಗಳು, ದಂಧೆಗಳು, ಗಾಂಜಾ, ಡ್ರಗ್ಸ್‌ ಮಾರಾಟ ಎಗ್ಗಿಲ್ಲದೇ ನಡೆದಿವೆ. ಇದನ್ನೇ ಜನವರಿ 17ರ ಸಮಾವೇಶದಲ್ಲಿ ಹೇಳಿದ್ದೆ. ಆಗ ಅನಿವಾರ್ಯವಾಗಿ ಅತ್ಯಾಚಾರ ಸಂತ್ರಸ್ತೆ ಕುರಿತು ಮಾತನಾಡಬೇಕಾಯಿತು. ಇದರಿಂದ ಬಾಲಕಿಗೆ, ಆಕೆಯ ತಂದೆ ತಾಯಿಗೆ ನೋವಾಗಿದ್ದರೆ ಕ್ಷಮೆ ಕೋರುವೆ. ನ್ಯಾಯ ಒದಗಿಸಿಕೊಡುವಲ್ಲಿ ನಾನು ಆ ಕುಟುಂಬದ ಜೊತೆ ನಿಲ್ಲುವೆ. ಸಂತ್ರಸ್ತೆಯೂ ನನ್ನ ಮಗಳಂತೆ. ಈ ವಿಷಯದಲ್ಲಿ ಕಾನೂನು ಕ್ರಮಗಳನ್ನು ಎದುರಿಸುತ್ತೇನೆ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜನವರಿ 1ರಂದು ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಬಹಿರಂಗಪಡಿಸಿದ್ದೇವೆ. ಹೋರಾಟ ಮುಂದುವರಿಸುತ್ತೇವೆ. ದಾಳಿ ಖಂಡಿಸಿ ಪಾದಯಾತ್ರೆ ನಡೆಸಲು ಆರಂಭದಲ್ಲಿ ಒಪ್ಪಿಗೆ ಸಿಕ್ಕಿತ್ತು. ಆದರೆ, ಮುಂದೂಡುವಂತೆ ಬಳಿಕ ಸೂಚನೆ ಬಂತು. ಮುಂದಿನ ದಿನಗಳಲ್ಲಿ ಈ ಕುರಿತು ಪಕ್ಷ ತೀರ್ಮಾನ ಮಾಡಲಿದೆ’ ಎಂದು ಶ್ರೀರಾಮುಲು ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.