ADVERTISEMENT

ರಾಜ್ಯಪಾಲರ ನಿರ್ಧಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:05 IST
Last Updated 17 ಆಗಸ್ಟ್ 2024, 16:05 IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಗೆಹಲೋತ್‌ ಅವರು ಅನುಮತಿ‌ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಗೆಹಲೋತ್‌ ಅವರು ಅನುಮತಿ‌ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.   

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಗೆಹಲೋತ್‌ ಅವರು ಅನುಮತಿ‌ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ಧ ಘೋಷಣೆ ‌ಕೂಗಿ ಕಾರ್ಯಕರ್ತರು ಆಕ್ರೋಶ ‌ವ್ಯಕ್ತಪಡಿಸಿದರು.

‘ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.