ADVERTISEMENT

ಸಿದ್ದರಾಮಯ್ಯರಿಂದ ಹಿಂದುಳಿದ ವರ್ಗಕ್ಕೆ ಮೋಸ: ಬಿಜೆಪಿ ಯುವ ಮೋರ್ಚಾ ಆರೋಪ

ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2024, 16:13 IST
Last Updated 13 ಡಿಸೆಂಬರ್ 2024, 16:13 IST
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಬಜೆಟ್‌ನಲ್ಲಿ ಘೋಷಿಸಿದಂತೆ ಹಣ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಬಜೆಟ್‌ನಲ್ಲಿ ಘೋಷಿಸಿದಂತೆ ಹಣ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಬಳ್ಳಾರಿ: ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ
ಬಜೆಟ್‌ನಲ್ಲಿ ಘೋಷಿಸಿದಂತೆ ₹1,500 ಕೋಟಿ ಅನುದಾನದಲ್ಲಿ ಕೇವಲ ₹57 ಕೋಟಿ ಬಿಡುಗಡೆ ಮಾಡಿ ಅಹಿಂದ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರ ವಂಚಿಸಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್‌ ಮೋಕಾ ಆರೋಪಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ‘ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರು , ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡದೆ ನಿರ್ಲಕ್ಷಿಸಿದ್ದಾರೆ’ ಎಂದು ಆರೋಪಿಸಿದರು. 

‘ಸ್ವ-ಉದ್ಯೋಗ ಯೋಜನೆ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಅರಿವು ಯೋಜನೆ ಹಾಗೂ ಸಣ್ಣ ಹಿಡುವಳಿದಾರ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಮಂಜೂರು ಮಾಡಲಾಗುತ್ತಿದ್ದ ಉಚಿತ ಬೋರ್‌ವೆಲ್ ಕಾರ್ಯಕ್ರಮಗಳು ಬಹುತೇಕ ಸ್ಥಗಿತಗೊಂಡಿವೆ. ಗ್ಯಾರೆಂಟಿ ಯೋಜನೆಯ ಅನುಷ್ಠಾನಕ್ಕಾಗಿ ಹಿಂದುಳಿದ ಸಮುದಾಯಗಳ ಹಣವೆಲ್ಲವೂ ವರ್ಗಾವಣೆಯಾಗುತ್ತಿದೆ’ ಎಂದು ಆರೋಪಿಸಿದರು. 

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್‌ ಮೋಕಾ, ಕೆ.ಎಸ್.ದಿವಾಕರ್ ಮತ್ತು ಹನುಮೇಶ್ ಉಪ್ಪಾರ, ಸಿದ್ದೇಶ, ರಾಣಿತೋಟ ವೀರೇಶ್, ರಾಮಾಂಜನಿ, ರಾಮಚಂದ್ರಯ್ಯ, ಸುಮಾರೆಡ್ಡಿ, ಪುಷ್ಪ, ಸುಗುಣ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.