ADVERTISEMENT

ಹೊಸಪೇಟೆ: ಸಂಭ್ರಮದ ಸಿದ್ಧರಾಮೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 5:55 IST
Last Updated 1 ಫೆಬ್ರುವರಿ 2023, 5:55 IST
ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಅವರ ಭಾವಚಿತ್ರದ ಮೆರವಣಿಗೆಯಲ್ಲಿ ಯುವಕರು ಕೋಲಾಟವಾಡಿದರು
ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಅವರ ಭಾವಚಿತ್ರದ ಮೆರವಣಿಗೆಯಲ್ಲಿ ಯುವಕರು ಕೋಲಾಟವಾಡಿದರು   

ಹೊಸಪೇಟೆ (ವಿಜಯನಗರ): ಜಿಲ್ಲಾ ಭೋವಿ (ವಡ್ಡರ) ಸಂಘದಿಂದ ಸಿದ್ಧರಾಮೇಶ್ವರ ಜಯಂತಿಯನ್ನು ಮಂಗಳವಾರ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಮಹಾತ್ಮಗಾಂಧಿ ವೃತ್ತದಿಂದ ಪಟೇಲ್‌ ನಗರದ ವೆಂಕಟೇಶ್ವರ ಕಲ್ಯಾಣಮಂಟಪದವರೆಗೆ ಸಿದ್ಧರಾಮೇಶ್ವರರ ಚಿತ್ರದ ಮೆರವಣಿಗೆ ನಡೆಯಿತು. ಕೋಲಾಟ ಗಮನ ಸೆಳೆಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಚ್‌. ದೊಡ್ಡರಾಮಣ್ಣ, ಮಾಜಿ ಶಾಸಕರಾದ ಎಚ್‌.ಆರ್‌. ಗವಿಯಪ್ಪ, ಸೈಯ್ಯದ್‌ ಮಹಮ್ಮದ್‌, ಮಹಮ್ಮದ್‌ ಇಮಾಮ್‌ ನಿಯಾಜಿ, ಸಿದ್ದನಗೌಡ, ಡಿ. ವೆಂಕಟರಮಣ ಪಾಲ್ಗೊಂಡಿದ್ದರು.

ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಭಾಗವಹಿಸಿ, ‘ಸಿದ್ಧರಾಮೇಶ್ವರರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರಮಜೀವಿಗಳಾದ ಈ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.