ತೆಕ್ಕಲಕೋಟೆ: ‘ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೋರ್‌ವೆಲ್, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ವಿವಿಧ ಗ್ರಾಮಗಳ ಕೆರೆಯ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ತೆಕ್ಕಲಕೋಟೆ ಹಾಗೂ 8 ಗ್ರಾಮಗಳ ಒಟ್ಟು 44 ಮೂಲಗಳ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ಬಂದಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಈರಣ್ಣ ತಿಳಿಸಿದ್ದಾರೆ.
‘ತಾಲ್ಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 3, ಸಿರಿಗೇರಿ ಗ್ರಾಮ 2, ಹಚ್ಚೊಳ್ಳಿ ಗ್ರಾಮ 11, ರಾವಿಹಾಳು ಗ್ರಾಮ 2, ಬಾಗೇವಾಡಿ ಗ್ರಾಮ 3, ಕುರುವಳ್ಳಿ ಗ್ರಾಮ 11 ನೀರಿನ ಮೂಲಗಳು ಅಲ್ಲದೆ ತೆಕ್ಕಲಕೋಟೆಯ 12 ಮೂಲಗಳ ನೀರು ಕುಡಿಯಲು ಯೋಗ್ಯವಾಗಿಲ್ಲ ಎನ್ನುವ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಯೋಗಾಲಯಗಳಲ್ಲಿ ದೃಢಪಟ್ಟಿದೆ. ಕರೂರು ಮತ್ತು ರಾರಾವಿಯ ಮೂಲಗಳ ನೀರು ಮಾತ್ರ ಕುಡಿಯಲು ಯೋಗ್ಯವಾಗಿವೆ. ಈ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ. ಮುದೇನೂರು, ರಾವಿಹಾಳ್ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬುದು ದೃಢಪಟ್ಟಿದ್ದು, ಗ್ರಾಮ ಪಂಚಾಯಿತಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.