
ಪ್ರಜಾವಾಣಿ ವಾರ್ತೆ
ಸಿರುಗುಪ್ಪ: ಸಮಗ್ರ ಶಿಕ್ಷಣ ಕರ್ನಾಟಕ, ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ವತಿಯಿಂದ ಸಿರುಗುಪ್ಪ ತಾಲ್ಲೂಕಿನ ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆ. 25ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು www.schooleducation.kar. nic.in 2 www.vidyavahini. karnataka.gov.in ಅರ್ಜಿ ಸಲ್ಲಿಸಬಹುದು.
ಸಿರುಗುಪ್ಪ ತಾಲ್ಲೂಕಿನ ಕಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಅರ್ಜಿ ಸಲ್ಲಿಸಬಹುದು ಎಂದು ಆದರ್ಶ ವಿದ್ಯಾಲಯದ ಮುಖ್ಯಗುರು ನಾರಾಯಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.