ADVERTISEMENT

ಕುಂದು ಕೊರತೆ | ಬಳ್ಳಾರಿ: ರಸ್ತೆಯ ಮೇಲೆ ಚರಂಡಿ ನೀರು ಹರಿದರೂ ಕೇಳೋರಿಲ್ಲ!!!

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 1:47 IST
Last Updated 22 ಜನವರಿ 2026, 1:47 IST
ಸಿರುಗುಪ್ಪ ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದ ಹತ್ತಿರ ರಸ್ತೆಯ ಮೇಲೆ ಹೊಲಸು ನೀರು ಹರಿಯುತ್ತಿದೆ
ಸಿರುಗುಪ್ಪ ನಗರದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದ ಹತ್ತಿರ ರಸ್ತೆಯ ಮೇಲೆ ಹೊಲಸು ನೀರು ಹರಿಯುತ್ತಿದೆ   

ಸಿರುಗುಪ್ಪ: ಇಲ್ಲಿನ ಪಾರ್ವತಿ ನಗರದ ಲಕ್ಷ್ಮೀವೆಂಕಟೇಶ್ವರ ಕಲ್ಯಾಣ ಮಂಟಪದ ಹತ್ತಿರ ರಸ್ತೆಯ ಮೇಲೆ ಹೊಲಸು ನೀರು ಹರಿಯುತ್ತಿದ್ದರು ಕೇಳೋರಿಲ್ಲ. ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಸ್ತೆಯ ಮೇಲೆ ಚರಂಡಿ ನೀರು ಹರಿಯುವುದು ಒಂದು ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ಸೊಳ್ಳೆಗಳ ಕಾಟ, ಸಾಂಕ್ರಾಮಿಕ ರೋಗಗಳ ಭೀತಿ, ವಾಹನ ಅಪಘಾತಗಳ ಸಾಧ್ಯತೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಸೂಕ್ತ ಚರಂಡಿ ನಿರ್ವಹಣೆ ವ್ಯವಸ್ಥೆ ಇಲ್ಲದಿರುವುದರ ಪರಿಣಾಮವಾಗಿದೆ.

ಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣದ ರಸ್ತೆಯೇ ಚರಂಡಿಯಂತಾಗಿದೆ. ಹೊಲಸು ನೀರು ರಸ್ತೆಯ ಮೇಲೇಯೇ ಹರಿಯುತ್ತಿದೆ. ಎಲ್ಲೆಡೆ ದುರ್ವಾಸನೆ ಬೀರುತ್ತಿದೆ. ಇದರಿಂದ ನಾಗರಿಕರು ಬೇಸತ್ತಯ ಹೋಗಿದ್ದಾರೆ. ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಪಾದಚಾರಿಗಳು ತುಂಬಾತೊಂದರೆ ಅನುಭವಿಸುವಂತಾಗಿದೆ. ದ್ವಿಚಕ್ರ ವಾಹನ ಸವಾರರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರ ಆರೋಪವಾಗಿದೆ.

ADVERTISEMENT

ಕಳೆದ ವಾರದಿಂದ ಚರಂಡಿ ತುಂಬಿ ಮಾಲಿನ್ಯ ನೀರು ಹರಿಯುತ್ತಿದೆ. ನಗರಸಭೆ ಅಧಿಕಾರಿಗಳಿಗೆ ಹಾಗು ಚುನಾಯಿತ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ, ಅವರ ಬೇಜವಾಬ್ದಾರಿ ತನಕ್ಕೆ ಸಾಕ್ಷಿಯಾಗಿದೆ ಎಂದು ಸ್ಥಳೀಯರಾದ ಈರಣ್ಣ, ಗಾದಿಲಿಂಗ, ಮಲ್ಲಿ, ರಘು, ಮಂಜು, ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.