ADVERTISEMENT

‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅವಶ್ಯ’

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 16:14 IST
Last Updated 29 ಜೂನ್ 2025, 16:14 IST
ಬಳ್ಳಾರಿ ನಗರದ ಶೃಂಗೇರಿ ಶಾರದಾ ಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
ಬಳ್ಳಾರಿ ನಗರದ ಶೃಂಗೇರಿ ಶಾರದಾ ಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಬಳ್ಳಾರಿ: ‘ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಗುರುಗಳು, ಪಾಲಕರಿಗೆ ಕೀರ್ತಿ ತರಬೇಕು' ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಅಸುಗೋಡು ಜಯಸಿಂಹ ಹೇಳಿದರು.

ನಗರದ ಸಂಗನಕಲ್ಲು ರಸ್ತೆಯ ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸಭಾಭವನದಲ್ಲಿ ಬಳ್ಳಾರಿ ಬ್ರಾಹ್ಮಣ ಒಕ್ಕೂಟದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

‘ಮಕ್ಕಳು ಮೊಬೈಲ್ ಫೋನ್‌ನಲ್ಲೇ ಹೆಚ್ಚು ಸಮಯ ಕಳೆಯಬಾರದು. ವಿವಿಧ ಕ್ಷೇತ್ರಗಳ ಸಾಧಕರನ್ನು ಮಾದರಿಯಾಗಿ ತೆಗೆದುಕೊಂಡು ಯಶಸ್ಸು ಗಳಿಸಬೇಕು’ ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಶ್ರೀನಾಥ್ ತಿಳಿಸಿದರು.

ADVERTISEMENT

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ರಾವ್, ಅಡ್ವೊಕೇಟ್ ಜನರಲ್ ಮಲ್ಲನರಾವ್ ಮಾತನಾಡಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಬಿ.ಎನ್. ಮೂರ್ತಿ, ಸಹ ಕಾರ್ಯದರ್ಶಿ ನೇಮಕಲ್ ರಾವ್, ಖಜಾಂಚಿ ಅನಿಲ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.