ADVERTISEMENT

ಬಳ್ಳಾರಿ: ಬಯಲು ಬಹಿರ್ದೆಸೆ ಮುಕ್ತ ಸಮಾಜ ನಿರ್ಮಿಸಿ -ರೋಹಿತಾಕ್ಷ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:26 IST
Last Updated 14 ಫೆಬ್ರುವರಿ 2026, 7:26 IST
ಸಿರುಗುಪ್ಪ ನಗರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ ತಾಲ್ಲೂಕು ಕಚೇರಿಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಮಹಿಳೆಯರಿಗೆ ಅನುದಾನದ ಮಂಜೂರಾತಿ ಪತ್ರವನ್ನು ಯೋಜನಾ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ವಿತರಿಸಿದರು
ಸಿರುಗುಪ್ಪ ನಗರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ ತಾಲ್ಲೂಕು ಕಚೇರಿಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಮಹಿಳೆಯರಿಗೆ ಅನುದಾನದ ಮಂಜೂರಾತಿ ಪತ್ರವನ್ನು ಯೋಜನಾ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ವಿತರಿಸಿದರು   

ಸಿರುಗುಪ್ಪ: ಬಯಲು ಬಹಿರ್ದೆಸೆಯಿಂದ ಸ್ವಚ್ಚತೆ ಹಾಗೂ ಆರೋಗ್ಯ ಹಾಳಾಗುತ್ತದೆ. ಬಯಲು ಶೌಚಾಲಯ ಮುಕ್ತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಯೋಜನಾ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಹೇಳಿದರು.

ನಗರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್‌ನ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಸ್ವ-ಸಹಾಯ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ‘ಶೌಚಾಲಯ ನಿರ್ಮಾಣ ಮತ್ತು ಬಳಕೆ ಕುರಿತು ಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಯಲು ಬಹಿರ್ದೆಸೆಯಿಂದ ಮಹಿಳೆಯರು ಅನುಭವಿಸುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಮನೆಗಳಲ್ಲಿಯೆ ಶೌಚಾಲಯ ನಿರ್ಮಿಸಿಕೊಂಡು ಸ್ವಚ್ಚತೆ ಕಾಪಾಡಬೇಕು ಎಂದು ತಿಳಿಸಿದರು.

ADVERTISEMENT

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಮಹಿಳೆಯರಿಗೆ ಅನುದಾನದ ಮಂಜೂರಾತಿ ಪತ್ರವನ್ನು ವಿತರಿಸಿದರು.

ತಾಲ್ಲೂಕಿನ ಯೋಜನಾಧಿಕಾರಿ ಸುಧೀರ್‌ ಹಂಗಳೂರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಮೇಲ್ವಿಚಾರಕರಾದ ರೇಣುಕಾ, ಚಂದ್ರಕಲಾ, ರೂಪಾ, ಕೃಷಿ ಮೇಲ್ವಿಚಾರಕ ವೀರೇಶ್‌ ಹಾಗೂ ಸೇವಾ ಪ್ರತಿನಿಧಿಗಳು ಮತ್ತು ಜ್ಞಾನವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.