ಬಳ್ಳಾರಿ: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಗ್ರಾಮಾಂತರ ಶಾಸಕ ನಾಗೇಂದ್ರ ಅವರ ಪಾತ್ರ ಇಲ್ಲ ಎಂದು ಎಸ್‌ಐಟಿ ಕ್ಲೀನ್ ಚಿಟ್ ಕೊಟ್ಟ ಬಳಿಕವೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಪದೇ ಪದೇ ನಾಗೇಂದ್ರ ಅವರ ಮೇಲೆ ಆರೋಪ ಮಾಡುತ್ತಿರುವುದು ಕ್ಷುಲ್ಲಕ ರಾಜಕಾರಣ’ ಎಂದು ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಒಂದೇ ವರ್ಷದಲ್ಲಿ 2 ಬಾರಿ ಚುನಾವಣೆ ಸೋತ ಶ್ರೀರಾಮುಲು ಭ್ರಮನಿರಸನಗೊಂಡಿದ್ದಾರೆ. ಅದೇ ಕಾರಣಕ್ಕೆ ಸಲ್ಲದ ಟೀಕೆಗಳನ್ನು ಮಾಡುತ್ತಿದ್ಧಾರೆ. ನಾಗೇಂದ್ರ ವರ್ಚಸ್ಸು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ರಾಮುಲು ಜನಸೇವೆಗೆ ಅರ್ಹರಲ್ಲ ಎಂದು ತಿಳಿದೇ ಬಳ್ಳಾರಿ, ವಿಜಯನಗರ ಜಿಲ್ಲೆಯ ಮತದಾರರು ಒಂದೇ ವರ್ಷದಲ್ಲಿ ಎರಡು ಬಾರಿ ಅವರನ್ನು ಮನೆಗೆ ಕಳುಹಿಸಿದ್ದಾರೆ. ಇದನ್ನು ಅರಿಯದೇ ಆರೋಪಗಳನ್ನು ಮಾಡಿಕೊಂಡು ವರ್ಚಸ್ಸು ವೃದ್ಧಿಸಿಕೊಳ್ಳಲು ರಾಮುಲು ಹೊರಟಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ಸಚಿವರಾಗಿದ್ದಾಗ ಆದ ಕೋವಿಡ್ ಹಗರಣ ಅವರಿಗೆ ಶ್ರೀರಾಮುಲು ಅವರಿಗೆ ನೆನಪಿಲ್ಲವೇ? ಹೀಗಿದ್ದರೂ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಮತ್ತು ನಾಯಕರ ಬಗ್ಗೆ ಕೀಳಾಗಿ ಮಾತನಾಡುವುದು ಇವರಿಗೆ ಗೀಳಾಗಿದೆ’ ಎಂದು ಹೆಗಡೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.