ಬಳ್ಳಾರಿ: ‘ತನಿಖೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ' ಎಂದು ಆರೋಪಿಸಿ ನಗರದ ಚಿನ್ನ ಮತ್ತು ಬೆಳ್ಳಿ ಆಭರಣ ತಯಾರಿಕರ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನೆ ಎರಡನೇ ದಿನವೂ ಮುಂದುವರಿಯಿತು.
ಪ್ರತಿಭಟನೆ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಮಂಗಳವಾರ ಬಂದ ಮಾಜಿ ಸಚಿವ ಬಿ. ಶ್ರೀರಾಮುಲು ಬೆಂಬಲ ಸೂಚಿಸಿದರು.
‘ಚಿನ್ನ ಬೆಳ್ಳಿ ಆಭರಣದ ಕಳವು ಪ್ರಕರಣಗಳಿಗೆ ಸಂಬಂಧಿಸಿ ಉದ್ಯಮದ ವರ್ತಕರನ್ನು ಮತ್ತು ಕೆಲಸಗಾರರನ್ನು ತನಿಖೆಯ ರೂಪದಲ್ಲಿ ಕಾನೂನು ಬಾಹಿರ ಹಿಂಸೆ, ದಬ್ಬಾಳಿಕೆ ನಡೆಸುತ್ತಿರುವುದನ್ನು ವಿರೋಧಿಸುತ್ತೇನೆ’ ಎಂದು ಹೇಳಿದರು.
ಈ ಕುರಿತ ಮನವಿ ಪತ್ರವನ್ನು ಜಿಲ್ಲಾ ಆಡಳಿತ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಚಿನ್ನ ಬೆಳ್ಳಿ ಸಂಘದ ರಾಜ್ಯ ಘಟಕದ ಅಧ್ಯಕ್ಷರು, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.