ಹೂವಿನಹಡಗಲಿ: ‘ಗ್ರಾಮೀಣ ವಿದ್ಯಾರ್ಥಿಗಳು ಸುಂದರ ಬದುಕು ಕಟ್ಟಿಕೊಳ್ಳಲು ಗುರುಗಳ ಮಾರ್ಗದರ್ಶನ ಅಗತ್ಯವಿದೆ. ಪರಿಣಾಮಕಾರಿ ಬೋಧನಾ ಕೌಶಲ ಅಳವಡಿಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು’ ಎಂದು ಜಿಬಿಆರ್ ಪದವಿ ಕಾಲೇಜು ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಹೇಳಿದರು.
ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘ ಶನಿವಾರ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಶಾಲಾ ಕಾಲೇಜುಗಳಲ್ಲಿ ಸೌಕರ್ಯಗಳ ಕೊರತೆ ಇದೆ. ಇದರ ನಡುವೆಯೂ ವಿದ್ಯಾರ್ಥಿಗಳು ಸಾಧನೆ ಮಾಡುವಂತೆ ಗುಣಾತ್ಮಕ ಬೋಧನಾ ಕ್ರಮಗಳನ್ನು ಅನುಸರಿಸಬೇಕು. ಈ ಭಾಗದ ವಿದ್ಯಾರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೌಡ್ರ ಬಸವರಾಜಪ್ಪ ಕಾರ್ಯಕ್ರಮ ಉದ್ಘಾಟಿಸಿ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಜತೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರೂ ಉನ್ನತಿ ಸಾಧಿಸುವಂತೆ ಮಾರ್ಗದರ್ಶನ ಮಾಡಬೇಕಿದೆ ಎಂದರು.
ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸೆಟ್ಟಿ ಪ್ರಕಾಶ, ನೌಕರರ ಸಂಘದ ಅಧ್ಯಕ್ಷ ಎ.ಕೊಟ್ರಗೌಡ, ಪಿಯು ನೋಡಲ್ ಅಧಿಕಾರಿ ಕೋರಿ ಹಾಲೇಶ್, ಪ್ರಾಚಾರ್ಯರಾದ ಅಮರೇಗೌಡ ಎನ್.ಪಾಟೀಲ, ಈಶ್ವರಪ್ಪ, ಸಣ್ಣನೀಲಪ್ಪ, ರೇವಣಸಿದ್ದಪ್ಪ, ಶಬೀನಾ, ಪ್ರಕಾಶ್ ಕಲ್ಲನಗೌಡ್ರ, ಮಲ್ಲಿಕಾರ್ಜುನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.