ಸಾಂದರ್ಭಿಕ ಚಿತ್ರ
ಬಳ್ಳಾರಿ: ಜಿಲ್ಲೆಯಾದ್ಯಂತ 15 ಕೇಂದ್ರಗಳಲ್ಲಿ ಜುಲೈ 5ರಿಂದ 12 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.