ADVERTISEMENT

ಭದ್ರತೆ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 13:30 IST
Last Updated 21 ಮಾರ್ಚ್ 2019, 13:30 IST
ಹೊಸಪೇಟೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಬಿಗಿ ಭದ್ರತೆ ನಡುವೆ ತಾಲ್ಲೂಕಿನಾದ್ಯಂತ ಗುರುವಾರ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ನಡೆಯಿತು.

ಹೆಸರು ನೋಂದಣಿ ಮಾಡಿಸಿದ್ದ ಒಟ್ಟು 6,338 ವಿದ್ಯಾರ್ಥಿಗಳ ಪೈಕಿ 6,108 ಮಂದಿ ಹಾಜರಾಗಿ ಪರೀಕ್ಷೆ ಬರೆದರು. 3,007 ಬಾಲಕರು, 3,101 ಬಾಲಕಿಯರು ಪರೀಕ್ಷೆ ಎದುರಿಸಿದರು.

ನಗರ 9, ಕಂಪ್ಲಿ 3, ತಾಲ್ಲೂಕಿನ ಮರಿಯಮ್ಮನಹಳ್ಳಿ, ಕಮಲಾಪುರದಲ್ಲಿ ತಲಾ 2 ಹಾಗೂ ಗಾದಿಗನೂರಿನ ಒಂದು ಕೇಂದ್ರದಲ್ಲಿ ಕನ್ನಡ, ಇಂಗ್ಲಿಷ್‌, ಉರ್ದು, ತಮಿಳು ಹಾಗೂ ತೆಲುಗು ಭಾಷೆ ಪರೀಕ್ಷೆಯನ್ನು ಎದುರಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿ, ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳ ಒಳಗೊಂಡಂತೆ ಜಿಲ್ಲಾ ಮತ್ತು ತಾಲ್ಲೂಕು ಹಂತದ ವಿಚಕ್ಷಣಾ ದಳಗಳ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.