ADVERTISEMENT

SSLC result: ಬಳ್ಳಾರಿಗೆ 29ನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 2 ಮೇ 2025, 7:26 IST
Last Updated 2 ಮೇ 2025, 7:26 IST
<div class="paragraphs"><p>ಎಸ್‌ಎಸ್‌ಎಲ್‌ಸಿ ಫಲಿತಾಂಶ</p></div>

ಎಸ್‌ಎಸ್‌ಎಲ್‌ಸಿ ಫಲಿತಾಂಶ

   

– ಗೆಟ್ಟಿ ಚಿತ್ರ

ಬಳ್ಳಾರಿ: ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 28ನೇ ಸ್ಥಾನ ಪಡೆದಿದ್ದ ಬಳ್ಳಾರಿ ಜಿಲ್ಲೆ ಈ ಬಾರಿಯ ಒಂದು ಸ್ಥಾನ ಕೆಳಗೆ ಜಾರಿದೆ. 

ADVERTISEMENT

ಪರೀಕ್ಷೆಗೆ ಹಾಜರಾದ ಒಟ್ಟು 20,126 ವಿದ್ಯಾರ್ಥಿಗಳಲ್ಲಿ 12,128 ಮಂದಿ ಪಾಸಾಗಿದ್ದು, ಶೇ 60.26 ರಷ್ಟು ಫಲಿತಾಂಶ ಸಿಕ್ಕಿದೆ. 

ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ‘ಕಲಿಕಾ ಆಸರೆ’, ‘ಪ್ರತಿಬಿಂಬ’  ಎಂಬ ಅಭ್ಯಾಸ ಪುಸ್ತಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿತ್ತು.

ಘಟಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಕಡಿಮೆ ಫಲಿತಾಂಶ ಬಂದ ಶಾಲೆಗಳನ್ನು ಗುರುತು ಮಾಡಿ, ಅವುಗಳತ್ತ ಹೆಚ್ಚಿನ ಗಮನ ಕೊಡಲಾಗಿತ್ತು. ಶಾಲೆಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೆಲ್ಲ ಕ್ರಮಗಳ ನಡುವೆಯೂ ಜಿಲ್ಲೆ 29ನೇ ಸ್ಥಾನಕ್ಕೆ ಇಳಿದಿದೆ.

ಜಿಲ್ಲೆಯ ಪ್ರೌಢ ಶಾಲೆಗಳಿಗೆ ಮಂಜೂರಾದ ಶಿಕ್ಷಕರ ಹುದ್ದೆಗಳು 1,198. ಆದರೆ, ಕರ್ತ್ಯವ್ಯ ನಿರ್ವಹಿಸುತ್ತಿರುವವರ ಸಂಖ್ಯೆ 711 ಮಾತ್ರ. ಇನ್ನುಳಿದ 487 ಹುದ್ದೆಗಳು ಖಾಲಿ ಬಿದ್ದಿವೆ. ಅತಿಥಿ ಶಿಕ್ಷಕರ ಒಟ್ಟು 1,611 ಹುದ್ದೆಗಳು ಮಂಜೂರಾಗಿದ್ದರೆ, 433 ಹುದ್ದೆಗಳು ಖಾಲಿ ಇವೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.