ADVERTISEMENT

ಬಳ್ಳಾರಿ | ಜಿಲ್ಲಾಧಿಕಾರಿ ಕಚೇರಿಯ 11 ಸಿಬ್ಬಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 7:53 IST
Last Updated 21 ಜುಲೈ 2020, 7:53 IST
   

ಬಳ್ಳಾರಿ:ನಗರದ ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 11 ಸಿಬ್ಬಂದಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಕೆಲವು ದಿನಗಳ ಹಿಂದೆ ಕಚೇರಿಯ ಆಪ್ತ ಸಹಾಯಕಸೇರಿದಂತೆ ಒಬ್ಬ ಸಿಬ್ಬಂದಿಗೆ ಸೋಂಕು ದೃಢಪಟ್ಟಿತ್ತು. ಅದೇ ಕಾರಣದಿಂದ‌ ಎಲ್ಲ ಸಿಬ್ಬಂದಿಯನ್ನೂ ಪರೀಕ್ಷೆಗೆ ಒಳಪಡಿಸಿದಬಳಿಕ 11 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಆ ಮೂಲಕ ಜಿಲ್ಲಾಧಿಕಾರಿ ಕಚೇರಿಯ ಒಟ್ಟು 13 ಮಂದಿ ‌ಸೋಂಕಿತರಾಗಿದ್ದಾರೆ. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಅಲ್ಲಿಂದಲೇಕರ್ತವ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.