ADVERTISEMENT

ಬಳ್ಳಾರಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ: 30ಕ್ಕೂ ಹೆಚ್ಚು ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 6:15 IST
Last Updated 7 ಫೆಬ್ರುವರಿ 2023, 6:15 IST
   

ಬಳ್ಳಾರಿ: ನಗರದ ವಾರ್ಡ್‌ ನಂ.30ರ ವಟ್ಟಪ್ಪಗೇರಿಯಲ್ಲಿ ಬೀದಿ ನಾಯಿಗಳು ಸೋಮವಾರ ರಾತ್ರಿ ಏಕಾಏಕಿ ನಡೆಸಿದ ದಾಳಿಯಿಂದಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಹಿಳೆಯರು, ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಲಿಕೆ ಆಯುಕ್ತ ರುದ್ರೇಶ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ADVERTISEMENT

ಈ ದಾಳಿಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಾಲಿಕೆ ಸಿಬ್ಬಂದಿ ಬೀದಿನಾಯಿಗಳನ್ನು ಹಿಡಿಯಲು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.