ಹಗರಿಬೊಮ್ಮನಹಳ್ಳಿ: ಪಟ್ಟಣದ ಸೋನಿಯಾಗಾಂಧಿ ನಗರದಲ್ಲಿ ಬೀದಿನಾಯಿ ದಾಳಿಯಿಂದಾಗಿ ಅಂಗನವಾಡಿಗೆ ತೆರಳುತ್ತಿದ್ದ ಐದು ವರ್ಷದ ಮಗು ಶ್ರೇಯಾ ತೀವ್ರವಾಗಿ ಗಾಯಗೊಂಡಿದ್ದಾಳೆ.
ಬುಧವಾರ ಬೆಳಿಗ್ಗೆ ಅಂಗನವಾಡಿ ಕೇಂದ್ರಕ್ಕೆ ತೆರಳುವಾಗ ದಾರಿ ಮಧ್ಯೆ ಏಕಾಏಕಿ ದಾಳಿ ನಡೆಸಿ ದೇಹದ ವಿವಿಧ ಭಾಗಗಳನ್ನು ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದ್ದರು. ಮಗು ತೀವ್ರವಾಗಿ ಗಾಯಗೊಂಡಿದ್ದರಿಂದ ಪರಿಣಾಮಕಾರಿ ಚಿಕಿತ್ಸೆಗೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.