ADVERTISEMENT

ಹೊಸಪೇಟೆ: ಆರು ತಿಂಗಳ ವೇತನ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 8:54 IST
Last Updated 7 ಮಾರ್ಚ್ 2023, 8:54 IST
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಸೋಮವಾರ ಹೊಸಪೇಟೆ ರಾಣಿಪೇಟೆಯಲ್ಲಿನ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಕಚೇರಿ ಎದುರು ಧರಣಿ ನಡೆಸಿದರು
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಸೋಮವಾರ ಹೊಸಪೇಟೆ ರಾಣಿಪೇಟೆಯಲ್ಲಿನ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಕಚೇರಿ ಎದುರು ಧರಣಿ ನಡೆಸಿದರು   

ಹೊಸಪೇಟೆ (ವಿಜಯನಗರ): ಆರು ತಿಂಗಳ ವೇತನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಸೋಮವಾರ ನಗರದ ರಾಣಿಪೇಟೆಯಲ್ಲಿನ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಕಚೇರಿ ಎದುರು ಧರಣಿ ನಡೆಸಿದರು.

ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಸರ್ಕಾರಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರಿಗೆ ನೀಡಿದಂತೆ ಹಾಸ್ಟೆಲ್‌ ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡಬೇಕು. ಬೇಸಿಗೆ ಮತ್ತು ದಸರಾ ರಜಾ ದಿನಗಳಲ್ಲಿ ಇತರೆ ನೌಕರರಿಗೆ ನೀಡುವಂತೆ ಹಾಸ್ಟೆಲ್‌ ನೌಕರರಿಗೆ ವೇತನ ನೀಡಬೇಕು. ನಿವೃತ್ತಿ ವಯಸ್ಸು 60 ಆಗುವವರೆಗೆ ಮಹಿಳಾ ನೌಕರರಿಗೆ ಕೆಲಸದ ಭದ್ರತೆ ಒದಗಿಸಬೇಕು. ಕನಿಷ್ಠ ವೇತನ ಮಾಸಿಕ ₹24 ಸಾವಿರ ನೀಡಬೇಕು. ವಾರಕ್ಕೆ ಒಂದು ದಿನ ಕಡ್ಡಾಯ ರಜೆ ನೀಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎಂ. ಜಂಬಯ್ಯ ನಾಯಕ, ಜಿಲ್ಲಾ ಸಹಕಾರ್ಯದರ್ಶಿ ಎಂ. ಧನರಾಜ್‌, ಜಿಲ್ಲಾ ಕಾರ್ಯದರ್ಶಿ ಬಿ. ರಮೇಶ್‌ ಕುಮಾರ್‌ ಇತರರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.