
ಹೂವಿನಹಡಗಲಿ: ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ತಹಶೀಲ್ದಾರ್ ಕೆ.ಎಂ.ಗುರುಬಸವರಾಜ ಹೇಳಿದರು.
ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಗಣರಾಜ್ಯೋತ್ಸವ ಕೇವಲ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ದೇಶಕ್ಕೆ ನಮ್ಮ ಹಿರಿಯ ನೀಡಿರುವ ಕೊಡುಗೆಗಳನ್ನು ಸ್ಮರಣೆ ಮಾಡುವ ದಿನವಾಗಿದೆ. ಭವಿಷ್ಯದ ಭಾರತ ಹೇಗಿರಬೇಕು ಎಂಬ ಚಿಂತನೆ ಮಾಡಬೇಕಿದೆ, ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಕೃಷ್ಣನಾಯ್ಕ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. ಮುಖಂಡರಾದ ಎಚ್.ಪೂಜಪ್ಪ, ವಾರದ ಗೌಸ್ ಮೋಹಿದ್ದೀನ್, ಪುನೀತ್ ದೊಡ್ಮನಿ, ಮೇಟಿ ಹುಲುಗೇಶ, ಎ.ಜಿ.ವೀರೇಶ, ತಾಪಂ ಇಒ ಜಿ.ಪರಮೇಶ್ವರ, ಬಿಇಒ ಮಹೇಶ ಪೂಜಾರ್, ಸಿಪಿಐ ದೀಪಕ್ ಭೂಸರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಕೊಟ್ರಗೌಡ, ಸಮಾಜ ಕಲ್ಯಾಧಿಕಾರಿ ಆನಂದ ಡೊಳ್ಳಿನ, ಸಿಡಿಪಿಒ ರಾಮನಗೌಡ, ಬಿ,ರಾಜಪ್ಪ, ಪ್ರದೀಪ್ ಕುಮಾರ, ರಮೇಶ ಇತರರಿದ್ದರು.
ಕರಾಟೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಮಾಗಳ ಪಿಎಂಶ್ರೀ ಸಮಾಹಿಪ್ರಾ ಶಾಲೆಯ ಕರಾಟೆ ಪಟುಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಪಟ್ಟಣದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಭೇತ್ ಪೇರಿ ನಡೆಸಿದರು. ಕಾರ್ಯಕ್ರಮದ ನಂತರದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.