ADVERTISEMENT

ಕೂಡ್ಲಿಗಿ| ಉನ್ನತ ಸ್ಥಾನ ಪಡೆಯಲು ಶ್ರಮಿಸಿ: ಕೆ.ಎಂ. ರವೀಂದ್ರನಾಥ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 5:37 IST
Last Updated 25 ಜನವರಿ 2026, 5:37 IST
24KDL1 : ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 1991ನೇ ಸಾಲಿನ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಸ್ನೇಹ ಮಿಲನ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ನಿವೃತ್ತ ಸಹಾಯಕ ನಿರ್ದೇಶಕ ಎಂ.ಬಸವರಾಜಪ್ಪ ಮಾತನಾಡಿದರು.
24KDL1 : ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 1991ನೇ ಸಾಲಿನ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಸ್ನೇಹ ಮಿಲನ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ನಿವೃತ್ತ ಸಹಾಯಕ ನಿರ್ದೇಶಕ ಎಂ.ಬಸವರಾಜಪ್ಪ ಮಾತನಾಡಿದರು.   

ಕೂಡ್ಲಿಗಿ: ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದಾಗ ಗುರುಗಳಲ್ಲಿ ಸಾರ್ಥಕ ಭಾವ ಮೂಡುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಕೆ.ಎಂ. ರವೀಂದ್ರನಾಥ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 1991ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಶಾಲೆಯಲ್ಲಿ ಓದಿದ ಅನೇಕರು ದೇಶ, ವಿದೇಶಗಳಲ್ಲಿ ಉನ್ನತ ಕೆಲಸಗಳನ್ನು ಪಡೆದಿದ್ದು, ಇನ್ನೂ ಕೆಲವರು ಸಂಸ್ಕಾರವಂತರಾಗಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ನೀವು ಗಳಿಸಿದ ಆಸ್ತಿ, ಸಂಪತ್ತು ಯಾವುದೂ ಕೂಡ ಕೊನೆ ತನಕ ಉಳಿವುದಿಲ್ಲ. ಆದರೆ ನೀವು ಕಲಿತ ವಿದ್ಯ, ಸಂಸ್ಕಾರ ಯಾವತ್ತು ನಿಮ್ಮನ್ನು ಕೈಬಿಡುವುದಿಲ್ಲ ಎಂದರು.

ADVERTISEMENT

ಅಕ್ಷರ ದಾಸೋಹ ನಿವೃತ್ತ ಸಹಾಯಕ ನಿರ್ದೇಶಕ ಎಂ.ಬಸವರಾಜಪ್ಪ ಮಾತನಾಡಿದರು. ನಿವೃತ್ತ ಶಿಕ್ಷಕರಾದ ಎ. ಗುರುಬಸಪ್ಪ, ಡಿ. ನಾಗರಾಜ, ಬ್ಯಾಳಿ ಗೌರಮ್ಮ, ಕೆ. ನಿಂಗಪ್ಪ, ಸಿ. ಮಹಾಲಿಂಗಪ್ಪ ಸೇರಿದಂತೆ ಹಳೆಯ ವಿಧ್ಯಾರ್ಥಿಗಳು ಇದ್ದರು. ಗುರುಗಳಿಗೆ ಸನ್ಮಾನ ಮಾಡಲಾಯಿತು. 1991ರಲ್ಲಿ ಕಾರ್ಯ ನಿರ್ವಹಿಸಿದ್ದ ಈಚೆಗೆ ನಿಧನರಾದ ಶಿಕ್ಷಕರು ಹಾಗೂ ಡಿ.ಗ್ರೂಪ್ ನೌಕರರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.