ADVERTISEMENT

ಮೂಲಸೌರ್ಕಯಕ್ಕೆ ಆಗ್ರಹಿಸಿ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2019, 12:55 IST
Last Updated 14 ಸೆಪ್ಟೆಂಬರ್ 2019, 12:55 IST
ಹೊಸಪೇಟೆಯ ವಿನೋಬಾ ಭಾವೆ ಶಾಲೆಯ ಮಕ್ಕಳು ಶನಿವಾರ ಪತ್ರ ಚಳವಳಿ ನಡೆಸಿದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯ ವಿನೋಬಾ ಭಾವೆ ಶಾಲೆಯ ಮಕ್ಕಳು ಶನಿವಾರ ಪತ್ರ ಚಳವಳಿ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಇಲ್ಲಿನ ಚಿತ್ತವಾಡ್ಗಿ ವಿನೋಬಾ ಭಾವೆ ಸರ್ಕಾರಿ ಶಾಲೆಯಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌.ಎಫ್‌.ಐ.) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ಪತ್ರ ಚಳವಳಿ ನಡೆಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌.ಡಿ. ಜೋಷಿ ಹೆಸರಿನಲ್ಲಿ ಪತ್ರ ಬರೆದು, ವಿದ್ಯಾರ್ಥಿಗಳು ಅವುಗಳನ್ನು ಅಂಚೆ ಪೆಟ್ಟಿಗೆಯೊಳಗೆ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಕಂಪ್ಯೂಟರ್‌ ಸೌಲಭ್ಯ ಕಲ್ಪಿಸಬೇಕು. ಶೌಚಾಲಯ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕು. ಕಾಂಪೌಂಡ್‌ ನಿರ್ಮಿಸಿ, ತಂತಿ ಬೇಲಿ ಹಾಕಬೇಕು. ಸಂಜೆಯಾದ ಬಳಿಕ ಶಾಲೆಯ ಪರಿಸರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

ADVERTISEMENT

ಎಸ್‌.ಎಫ್‌.ಐ. ಕಾರ್ಯದರ್ಶಿ ಜೆ. ಶಿವಕುಮಾರ, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.