ADVERTISEMENT

ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2019, 10:05 IST
Last Updated 4 ಜುಲೈ 2019, 10:05 IST
ಉಚಿತ ಬಸ್‌ ಪಾಸ್‌ ನೀಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಗುರುವಾರ ಹೊಸಪೇಟೆಯಲ್ಲಿ ಮನವಿ ಸಲ್ಲಿಸಿದರು
ಉಚಿತ ಬಸ್‌ ಪಾಸ್‌ ನೀಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಗುರುವಾರ ಹೊಸಪೇಟೆಯಲ್ಲಿ ಮನವಿ ಸಲ್ಲಿಸಿದರು   

ಹೊಸಪೇಟೆ: ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎ.ಬಿ.ವಿ.ಪಿ.) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ರ್‍ಯಾಲಿ ನಡೆಸಿದ ವಿದ್ಯಾರ್ಥಿಗಳು, ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್ಸಿ, ಎಸ್ಟಿ ಸೇರಿದಂತೆ ಇತರೆ ವರ್ಗದ ಎಲ್ಲ ಮಕ್ಕಳಿಗೆ ಉಚಿತವಾಗಿ ಬಸ್‌ ಪಾಸ್‌ ನೀಡಲಾಗುವುದು ಎಂದು ಸರ್ಕಾರಿ ಹೋದ ವರ್ಷದ ಬಜೆಟ್‌ನಲ್ಲಿ ಭರವಸೆ ನೀಡಿತ್ತು. ಆದರೆ, ಇದುವರಗೆ ಅದನ್ನು ಈಡೇರಿಸಿಲ್ಲ. ರಾಜ್ಯದಾದ್ಯಂತ ಬರಗಾಲದ ವಾತಾವರಣ ಇದೆ. ಖಾಸಗಿ ಶಾಲಾ–ಕಾಲೇಜುಗಳಲ್ಲಿ ಡೊನೋಷನ್‌ ಹಾವಳಿಯಿಂದ ವಿದ್ಯಾರ್ಥಿಗಳು ಸಮಸ್ಯೆಗೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್‌ ಪಾಸ್‌ ಕೊಟ್ಟರೆ ಅವರಿಗೆ ಅನುಕೂಲವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಸರ್ಕಾರ ಕೇವಲ ಅಧಿಕಾರ ಉಳಿಸಿಕೊಳ್ಳುವುದಕ್ಕೆ ಸೀಮಿತವಾಗಬಾರದು. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯ ಕಡೆಗೆ ಕಿವಿಗೊಡಬೇಕು ಎಂದು ಆಗ್ರಹಿಸಿದ್ದಾರೆ.

ಪರಿಷತ್ತಿನ ವಿಭಾಗೀಯ ಕಾರ್ಯದರ್ಶಿ ಗುರುರಾಜ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.