ಸಾವು (ಪ್ರಾತಿನಿಧಿಕ ಚಿತ್ರ)
ಕೂಡ್ಲಿಗಿ: ಯುವ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಳ್ಳಗಟ್ಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಪಿ. ಪರಮೇಶ್ವರ (33) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಇವರು ತಂದೆಯ ಹೆಸರಲ್ಲಿನಲ್ಲಿದ್ದ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ತಂದೆಯ ಹೆಸರಿನಲ್ಲಿ 3 ವರ್ಷಗಳ ಹಿಂದೆ ರಾಮದುರ್ಗದ ಪ್ರಗತಿ ಗ್ರಾಮೀಣ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಆದರೆ ಎರಡು ವರ್ಷಗಳಿಂದ ಸರಿಯಾಗಿ ಬೆಳೆ ಬಾರದ ಕಾರಣ ಬ್ಯಾಂಕ್ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಹೊಲದಲ್ಲಿ ಹಾಕಿದ್ದ ಹತ್ತಿ ಬೆಳೆ ಕೈಕೊಟ್ಟಿತ್ತು. ಇದರಿಂದ ಬೇಸತ್ತ ಪರಮೇಶ್ವರ ಸೋಮವಾರ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಮೃತರ ತಂದೆ ನೀಡಿದ ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.