ADVERTISEMENT

‘ಕಲಾಸೇವೆಗೆ ಸಹಕಾರ ಅಗತ್ಯ’

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 13:45 IST
Last Updated 8 ಜುಲೈ 2022, 13:45 IST
ಹೊಸಪೇಟೆಯಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಹಾರ್ಮೋನಿಯಂ ನುಡಿಸಿ ಚಾಲನೆ ನೀಡಿದರು
ಹೊಸಪೇಟೆಯಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಹಾರ್ಮೋನಿಯಂ ನುಡಿಸಿ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): 'ಕಲಾವಿದರ ಪ್ರತಿಭಾ ಪ್ರದರ್ಶನ ಹಾಗೂ ಸೇವೆಗೆ ಸಂಘ ಸಂಸ್ಥೆಗಳ ಸಹಕಾರ ಹೆಚ್ಚಿನ ಅವತ್ಯವಿದೆ’ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ ತಿಳಿಸಿದರು.

ನಗರದಲ್ಲಿ ಗುರುವಾರ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

‘ಮಕ್ಕಳಲ್ಲಿರುವ ಪ್ರತಿಭೆ ಹೊರಹಾಕಲು ಪೋಷಕರು, ಸಂಘ ಸಂಸ್ಥೆಗಳ ಸಹಕಾರ ಬಹುಮುಖ್ಯ. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಅವರ ಪ್ರತಿಭೆ ತೋರಿಸಲು ಉತ್ತಮ ಅವಕಾಶ’ ಎಂದು ಹೇಳಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ (ಬಿ.ಆರ್‌.ಸಿ.ಎಚ್) ಜಂಬಯ್ಯ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಆಟ, ಪಾಠದ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಹಾರ್ಮೋನಿಯಂ ನುಡಿಸಿ ಉದ್ಘಾಟಿಸಿದರು. ಕಲಾವಿದರಾದ ಮಲ್ಲಿಕಾರ್ಜುನ ಟಿ.ತುರವನೂರು, ಅಂಬಿಕಾ, ಎಚ್.ಎಂ.ಲಲಿತಾ, ವಾಲ್ಯಾ ನಾಯ್ಕ, ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಟಗಿ ಜಂಬಯ್ಯ ನಾಯಕ, ಗುಜ್ಜಲ ಚಂದ್ರಪ್ಪ, ಕಂಪ್ಲಿ ಕಣಿಮೆಪ್ಪ, ನಿಶಾನಿ ಕಣಿಮೆಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.