ADVERTISEMENT

ದೌರ್ಬಲ್ಯ ಮುಚ್ಚಿಕೊಳ್ಳಲು ಅಮಾನತು: ವಾಲ್ಮೀಕಿ ಜಗದ್ಗುರು

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 15:47 IST
Last Updated 9 ಜೂನ್ 2025, 15:47 IST
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ   

ಕಂಪ್ಲಿ (ಬಳ್ಳಾರಿ ಜಿಲ್ಲೆ): ‘ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತನ್ನ ದೌರ್ಬಲ್ಯ ಮುಚ್ಚಿಕೊಳ್ಳಲು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಅಮಾನತುಗೊಳಿಸಿದೆ’ ಎಂದು ವಾಲ್ಮೀಕಿ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಬೇಸರ ಹೇಳಿದರು.

ಇಲ್ಲಿಯ ವಾಲ್ಮೀಕಿ ಸಮುದಾಯ ಭವನದಲ್ಲಿ, ರಾಜ್ಯ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ವಾಲ್ಮೀಕಿ ಸಮಾಜದ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರಕರಣದಲ್ಲಿ ಸರ್ಕಾರ ವೈಫಲ್ಯ, ಅಸಹಾಯಕತೆ ಕಂಡುಬರುತ್ತಿದೆ’ ಎಂದು ಆರೋಪಿಸಿದರು. 

‘ಅಯೋಧ್ಯೆಯಲ್ಲಿ ರಾಮನ ಪ್ರತಿಮೆ ಪ್ರತಿಷ್ಠಾಪಿಸಿದರು. ಆದರೆ, ವಾಲ್ಮೀಕಿ ಮಹರ್ಷಿಯನ್ನೇ ಮರೆತುಬಿಟ್ಟರು’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.