ADVERTISEMENT

ತಹಶೀಲ್ದಾರ್ ಅಮಾನತು

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 18:16 IST
Last Updated 27 ಜುಲೈ 2024, 18:16 IST

ಹೂವಿನಹಡಗಲಿ: 2019ರಲ್ಲಿ ಬ್ಯಾಡಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಇಲ್ಲಿನ ತಹಶೀಲ್ದಾರ್ ಕೆ. ಶರಣಮ್ಮ ಅವರನ್ನು ಸೇವೆಯಿಂದ ಅಮಾನತು ಮಾಡಿ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವರ್ಗಾವಣೆ ಮಾಡಲಾಗಿದೆ.

ಶರಣಮ್ಮ ಅವರು ಬ್ಯಾಡಗಿಯಲ್ಲಿ ತಹಶೀಲ್ದಾರ್‌ ಆಗಿದ್ದ ಸಂದರ್ಭದಲ್ಲಿ ಬೆಳೆ ಪರಿಹಾರದ ಹಣವನ್ನು 29 ಅನರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಿ ಸರ್ಕಾರಕ್ಕೆ ₹8.57 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಜಿ.ಮುಕ್ತಾರ್ ಪಾಷಾ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT