ADVERTISEMENT

ತುಂಗಭದ್ರೆಯಲ್ಲಿ 13 ಟಿಎಂಸಿ ದಾಟಿದ ನೀರು

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 12:26 IST
Last Updated 16 ಜುಲೈ 2019, 12:26 IST
ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿರುವುದು
ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿರುವುದು   

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿರುವ ಕಾರಣ ನೀರಿನ ಸಂಗ್ರಹ ಮಟ್ಟ ದಿನೇ ದಿನೇ ಏರಿಕೆಯಾಗುತ್ತಿದೆ.

ಸದ್ಯ ಅಣೆಕಟ್ಟೆಯಲ್ಲಿ 13.39 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿದೆ. 12,875 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಸೋಮವಾರ 15,026 ಕ್ಯುಸೆಕ್‌ ಒಳಹರಿವು ಇತ್ತು.12.30 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಒಂದೇ ದಿನದಲ್ಲಿ ಒಂದು ಟಿ.ಎಂ.ಸಿ. ಅಡಿಗೂ ಹೆಚ್ಚು ನೀರು ಬಂದಿದೆ. ಆದರೆ, ಒಳಹರಿವು ಸ್ವಲ್ಪ ತಗ್ಗಿದೆ.

ಶಿವಮೊಗ್ಗದ ತುಂಗಾ ಮತ್ತು ಭದ್ರಾ ಜಲಾಶಯ ತುಂಬಿಕೊಂಡಿದ್ದು, ಅಲ್ಲಿಂದ ನೀರು ಹರಿಸುತ್ತಿರುವ ಕಾರಣ ತುಂಗಭದ್ರೆಯಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿದೆ. ಇನ್ನೂ ಕೆಲವು ದಿನಗಳ ವರೆಗೆ ಇದೇ ರೀತಿ ಒಳಹರಿವು ಇರಲಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.