ADVERTISEMENT

ಮರಿಯಮ್ಮನಹಳ್ಳಿ: ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 2:45 IST
Last Updated 5 ಜನವರಿ 2026, 2:45 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮರಿಯಮ್ಮನಹಳ್ಳಿ: ಡಿಸೆಂಬರ್ 30ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ವಿಜಯಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕರೊಬ್ಬರು ಶನಿವಾರ ಮೃತಪಟ್ಟಿದ್ದಾರೆ.

ADVERTISEMENT

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ಗ್ರಾಮದ ಮೊರಾರ್ಜಿ ಶಾಲೆಯ ಶಿಕ್ಷಕ ಮುತ್ತಪ್ಪ ಯಲ್ಲಪ್ಪ ಕೊಡಗಿ (37) ಮೃತರು. ಪಟ್ಟಣದ ಬಳಿಯ ತಿಮ್ಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ-50 ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಸಾವು: ಅನಾರೋಗ್ಯದಿಂದ ಬಳಲುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ದೇವಲಾಪುರ ಕ್ರಾಸ್‌ ಬಳಿ ಓಡಾಡುತ್ತಿದ್ದ ಇವರು, ಅನಾರೋಗ್ಯದಿಂದ ಬಳಲುತ್ತಿದ್ ಕಾರಣ ದಾಬಾ ಮಾಲೀಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು.

ಮೃತರ ಹೆಸರು ಪತ್ತೆಯಾಗಿಲ್. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.