ಹಗರಿಬೊಮ್ಮನಹಳ್ಳಿ: ಇಲ್ಲಿನ ಚಿಂತ್ರಪಳ್ಳಿ ರಸ್ತೆಯ ಪಕ್ಕದಲ್ಲಿ ವಾಸವಾಗಿರುವ ಸಿಂದೊಳ್ಳಿ ಜನಾಂಗದ ಅಲೆಮಾರಿಗಳ ಮಕ್ಕಳನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಾಥಮಿಕ ಶಾಲೆಯ ಶಿಕ್ಷಕರು ಶಾಲೆಗೆ ಕರೆದುಕೊಂಡು ಹೋದರು.
ಶನಿವಾರ ಶಾಲೆ ಆರಂಭವಾಗುವ ಸಮಯಕ್ಕೆ 50ಕ್ಕೂ ಹೆಚ್ಚು ಬಾಲಕ ಮತ್ತು ಬಾಲಕಿಯರನ್ನು ಕರೆತಂದರು, ತರಗತಿಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದರು.
ನಿರಂತರವಾಗಿ ಅಲೆಮಾರಿ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ದಿನ ಇಬ್ಬರು ಶಿಕ್ಷಕರು ಟೆಂಟ್‌ಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವಂತೆ ಸೂಚನೆ ನೀಡಲಾಗಿದೆ ಎಂದು ಬಿಇಒ ಮೈಲೇಶ್ ಬೇವೂರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.