
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬಳ್ಳಾರಿ: ತಾಲೂಕಿನ ಹಗರಿ (ವೇದಾವತಿ) ನದಿಯಲ್ಲಿ ಮಂಗಳವಾರ ಈಜಲು ಹೋಗಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಪೈಕಿ ಕಿರಣ್ (16) ಎಂಬಾತನ ಮೃತದೇಹ ಗುರುವಾರ ಮುಂಜಾನೆ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್‌ಸಿ–ವಿಮ್ಸ್)ಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ್ಣುಸಾಯಿ (14) ಎಂಬ ಬಾಲಕ ಮೃತದೇಹ ಗುರುವಾರವೂ ಸಿಗಲಿಲ್ಲ. ಹೀಗಾಗಿ ಶುಕ್ರವಾರ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸಲು ತೀರ್ಮಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.