ಬಳ್ಳಾರಿ: ‘ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) 10 ವರ್ಷಕ್ಕೂ ಹೆಚ್ಚು ಸಮಯದಿಂದ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಿ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿಯ ಎಪಿಸಿಎಂಸಿ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಭೆ ನಡೆಸಿದ ಅವರು, ‘ಹಲವು ಸಿಬ್ಬಂದಿ ದೀರ್ಘಾವಧಿಯಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆಯೇ’ ಎಂದು ಕೇಳಿ ಆಶ್ಚರ್ಯ ವ್ಯಕ್ತಪಡಿಸಿದರು.
‘ರಾಜ್ಯದ ಎಪಿಎಂಸಿಗಳಲ್ಲಿ ಯಾವ ಸಿಬ್ಬಂದಿ ಒಂದೇ ಕಡೆ 10 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ? ಅವರ ವಿರುದ್ಧ ಇರುವ ದೂರುಗಳು ಎಷ್ಟು? ಭ್ರಷ್ಟಾಚಾರದ ಪ್ರಕರಣಗಳು ಎಷ್ಟು? ಎಂಬುದನ್ನು ಪಟ್ಟಿ ಮಾಡಿ ಕೊಡಿ’ ಎಂದು ಎಪಿಎಂಸಿ ನಿರ್ದೇಶಕ ಶಿವಾನಂದ ಕಾಪ್ಸೆ ಅವರಿಗೆ ಸೂಚಿಸಿದರು.
‘ಎಪಿಎಂಸಿಗಳಲ್ಲಿ ಮಧ್ಯವರ್ತಿಗಳಿಗೆ ನೀಡಲಾಗುವ ಪರವಾನಗಿ ಅವಧಿಯನ್ನು 10 ವರ್ಷ ಬದಲು 5 ವರ್ಷಕ್ಕೆ ಮಿತಿಗೊಳಿಸಲು ಚಿಂತನೆ ನಡೆದಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.