ಕಂಪ್ಲಿ: ‘ಒಳಮೀಸಲಾತಿ ಜಾರಿ ಮಾಡುವ ಮುನ್ನವೇ ಸರ್ಕಾರಿ ಹುದ್ದೆಗಳಿಗೆ ನೇಮಕ, ಬಡ್ತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಕೂಡಲೇ ರದ್ದುಗೊಳಿಸುವಂತೆ ಹೊಸಪೇಟೆಯಲ್ಲಿ ನಡೆಯುವ ಕಾಂಗ್ರೆಸ್ ಸಾಧನಾ ಸಮಾವೇಶ ಸಂದರ್ಭದಲ್ಲಿ ಸಿ.ಎಂ. ಅವರನ್ನು ಒತ್ತಾಯಿಸುವಂತೆ’ ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ್ ಪ್ರಸಾದ್ ಮಾದಿಗ ಸಮುದಾಯದವರಲ್ಲಿ ಮನವಿ ಮಾಡಿದರು.
ಇಲ್ಲಿಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಕ್ರಾಂತಿಕಾರಿ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿ, ಬೇಡಿಕೆ ಈಡೇರಿಸದಿದ್ದಲ್ಲಿ ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಸಮಾವೇಶದಲ್ಲಿ ಸಂದೇಶ ರವಾನಿಸುವಂತೆ ಸಮುದಾಯದ ಮುಖಂಡರಿಗೆ ಸೂಚಿಸಿದರು.
ಪಟ್ಟಣದ ವಾಲ್ಮೀಕಿ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ, ಬೈಕ್ ರ‍್ಯಾಲಿ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.
ಪುರಸಭೆ ಅಧ್ಯಕ್ಷ ಭಟ್ಟಪ್ರಸಾದ್, ಮಾದಿಗ ಸಮುದಾಯದ ಪ್ರಮುಖರಾದ ವೀರಾಂಜನೇಯಲು, ಡಿಶ್ ಪ್ರಸಾದ್, ನಾಗರಾಜ, ಆರ್.ಎಂ. ರಾಮಯ್ಯ, ಎಚ್. ಶ್ರೀನಿವಾಸಲು, ಮೆಟ್ರಿ ಕುಮಾರಸ್ವಾಮಿ, ಮರಿಸ್ವಾಮಿ, ಲಕ್ಷ್ಮಿಪತಿ, ಸಣ್ಣ ಹನುಮಂತ, ಎಚ್. ಗುಂಡಪ್ಪ, ಆರ್. ಆಂಜಿನೇಯ, ಎನ್. ಗಂಗಣ್ಣ, ಎನ್. ಬುಜ್ಜಿಕುಮಾರ್, ಎಚ್. ಶೇಖರ, ಎಚ್. ಯಲ್ಲಪ್ಪ, ಮೋಚಿ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.