ADVERTISEMENT

ನಾರಿಹಳ್ಳ ಜಲಾಶಯ ಭರ್ತಿ: 400 ಕ್ಯೂಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 3:41 IST
Last Updated 10 ಜುಲೈ 2022, 3:41 IST
ತೋರಣಗಲ್ಲು ಸಮೀಪದ ತಾರಾನಗರ ಗ್ರಾಮದ ನಾರಿಹಳ್ಳ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ 400 ಕ್ಯೂಸೆಕ್‌ ನೀರನ್ನು ಹೊರಬಿಡಲಾಯಿತು
ತೋರಣಗಲ್ಲು ಸಮೀಪದ ತಾರಾನಗರ ಗ್ರಾಮದ ನಾರಿಹಳ್ಳ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ 400 ಕ್ಯೂಸೆಕ್‌ ನೀರನ್ನು ಹೊರಬಿಡಲಾಯಿತು   

ತೋರಣಗಲ್ಲು: ಸಮೀಪದ ನಾರಿಹಳ್ಳ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಒಂದು ಗೇಟ್‌ನ ಮೂಲಕ 400 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ.

ಸಂಡೂರು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಹಾಗೂ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಜಿಟಿಜಿಟಿ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ದಿನ ದಿನಕ್ಕೆ ಹೆಚ್ಚಿನ ಪ್ರಮಾಣದ ನೀರು ಸಂಗ್ರಹಗೊಂಡು, ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ.

‘ನಾರಿಹಳ್ಳ ಜಲಾಶಯದ ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಕೆಳ ಭಾಗದ ಹಳ್ಳಿಗಳ ಜನರಿಗೆ, ರೈತರಿಗೆ ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನೀರು ಬೀಡುವ ವಿಷಯ ತಿಳಿಸಿದ ನಂತರ ಶುಕ್ರವಾರ ರಾತ್ರಿ ಹಳ್ಳಕ್ಕೆ ನೀರು ಬೀಡಲಾಗಿದೆ. ಮಳೆಯ ಪ್ರಮಾಣ ಹೆಚ್ಚಾದರೆ ಹೆಚ್ಚಿನ ನೀರನ್ನು ಹೊರ ಬಿಡಲಾಗುವುದು’ ಜಲಾಶಯದ ಶಾಖಾಧಿಕಾರಿ ಎಚ್.ಧನುಂಜಯ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.