ADVERTISEMENT

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ 60,425 ಕ್ಯುಸೆಕ್‌ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 7:21 IST
Last Updated 6 ಆಗಸ್ಟ್ 2020, 7:21 IST
ಹೊಸಪೇಟೆಯ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ.
ಹೊಸಪೇಟೆಯ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ.   

ಹೊಸಪೇಟೆ: ಒಂದೇ ದಿನದಲ್ಲಿ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಏಕಾಏಕಿ ಹೆಚ್ಚಳವಾಗಿದೆ. 17,858 ಕ್ಯುಸೆಕ್‌ ಒಳಹರಿವು ಗುರುವಾರ ದಾಖಲಾಗಿದೆ.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,612.50 ಅಡಿ ನೀರಿನ ಸಂಗ್ರಹವಿದೆ. 7,808 ಕ್ಯುಸೆಕ್‌ ನೀರು ಕಾಲುವೆಗಳಿಗೆ ಹರಿಸಲಾಗುತ್ತಿದೆ. ಬುಧವಾರ 4,446 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು.

‘ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 60,425 ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಮಳೆಯಿದ್ದರೆ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.