ADVERTISEMENT

ಮಲೆನಾಡಿನಲ್ಲಿ ಉತ್ತಮ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 6:41 IST
Last Updated 23 ಜುಲೈ 2019, 6:41 IST
ಕಾರ್ಮೋಡ ಆವರಿಸಿಕೊಂಡಾಗ ತುಂಗಭದ್ರಾ ಜಲಾಶಯದ ಹಿನ್ನೀರು ಕಂಡಿದ್ದು ಹೀಗೆ
ಕಾರ್ಮೋಡ ಆವರಿಸಿಕೊಂಡಾಗ ತುಂಗಭದ್ರಾ ಜಲಾಶಯದ ಹಿನ್ನೀರು ಕಂಡಿದ್ದು ಹೀಗೆ   

ಹೊಸಪೇಟೆ: ಕಳೆದ ಕೆಲ ದಿನಗಳಿಂದ ತಗ್ಗಿದ್ದ ತುಂಗಭದ್ರಾ ಜಲಾಶಯದ ಒಳಹರಿವು ಮಂಗಳವಾರ ಹೆಚ್ಚಾಗಿದೆ.

ಸದ್ಯ ಜಲಾಶಯದಲ್ಲಿ 17.34 ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗಿದ್ದು, 8,521 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. 1,797 ಕ್ಯುಸೆಕ್‌ ನೀರು ಕಾಲುವೆಗಳ ಮೂಲಕ ಹೊರ ಬಿಡಲಾಗುತ್ತಿದೆ.

ಸೋಮವಾರ 4,381 ಕ್ಯುಸೆಕ್‌ ಒಳಹರಿವು ಇತ್ತು. ಒಂದೇ ದಿನದಲ್ಲಿ ಒಳಹರಿವು ಎರಡು ಪಟ್ಟು ಹೆಚ್ಚಳವಾಗಿದ್ದು, ಸುಮಾರು ಒಂಟು ಟಿ.ಎಂ.ಸಿ. ಅಡಿ ನೀರು ಹರಿದು ಬಂದಿದೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವುದು, ತುಂಗಾ ಜಲಾಶಯದಿಂದ ನೀರು ಹರಿಸುತ್ತಿರುವ ಕಾರಣ ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.