ADVERTISEMENT

ತುಂಗಭದ್ರಾ ಜಲಾಶಯ: ಬೇಸಿಗೆಯಲ್ಲಿ ಒಳಹರಿವು ಆರಂಭ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 9:50 IST
Last Updated 26 ಏಪ್ರಿಲ್ 2021, 9:50 IST

ಹೊಸಪೇಟೆ (ವಿಜಯನಗರ): ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ನೀರು ಹರಿದು ಬರುತ್ತಿದೆ.

ಸೋಮವಾರ 825 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಭಾನುವಾರ 640 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಒಳಹರಿವು ಸತತ ಹೆಚ್ಚಾಗುತ್ತಲೇ ಇದೆ.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,576.23 ಅಡಿ ನೀರಿನ ಸಂಗ್ರಹವಿದೆ. 209 ಕ್ಯುಸೆಕ್‌ ಕಾಲುವೆಗೆ ಹರಿಸಲಾಗುತ್ತಿದೆ.

ADVERTISEMENT

ಕೆಂಡದಂತಹ ಬಿಸಿಲಿನಿಂದ ಅಣೆಕಟ್ಟೆಯಲ್ಲಿ ದಿನೇ ದಿನೇ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲೇ ಉತ್ತಮ ಮಳೆಯಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಸಂಗ್ರಹ ಹೆಚ್ಚಾಗುತ್ತಿದೆ. ಇದು ಸಹಜವಾಗಿಯೇ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹರ್ಷ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.