ADVERTISEMENT

ತುಂಗಭದ್ರೆಗೆ 40 ಸಾವಿರ ಕ್ಯುಸೆಕ್‌ ಒಳಹರಿವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 10:17 IST
Last Updated 7 ಆಗಸ್ಟ್ 2019, 10:17 IST
ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿರುವುದು
ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿರುವುದು   

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಹೆಚ್ಚಳ ಉಂಟಾಗಿದೆ.

ಬುಧವಾರ 40,781 ಕ್ಯುಸೆಕ್‌ ಒಳಹರಿವು ದಾಖಲಾಗಿದ್ದು, 1,612.44 ಅಡಿ ನೀರಿನ ಸಂಗ್ರಹವಾಗಿದೆ.ಮಂಗಳವಾರ 23,052 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ಒಳಹರಿವು ಭಾರಿ ಹೆಚ್ಚಳವಾಗಿದ್ದರಿಂದ ಒಂದೇ ದಿನದಲ್ಲಿ ಸುಮಾರು ನಾಲ್ಕು ಟಿ.ಎಂ.ಸಿ. ಅಡಿಗೂ ಅಧಿಕ ನೀರು ಬಂದಿದೆ.

‘ತುಂಗಾ ಮತ್ತು ಭದ್ರಾ ಜಲಾಶಯದ ಎಲ್ಲ ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಮಂಡಳಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.